ಸಿಎಂ ರಾಜೀನಾಮೆಗೆ ಪಕ್ಷದೊಳಗೆ ಯಾವುದೇ ಒತ್ತಡವಿಲ್ಲ: ಸಚಿವ ಪರಮೇಶ್ವರ್

Waves of Karnataka


 ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ವೀಕ್ ಆಗಿಲ್ಲ, ಕಲ್ಲುಬಂಡೆಯಂತೆ ಗಟ್ಟಿಯಾಗಿದ್ದು, ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬುಧವಾರ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದಿಲ್ಲ. ಪಕ್ಷದಲ್ಲಿ ಅಂತಹ ಮಾತುಕತೆಯಾಗಲೀ, ಒತ್ತಡವಾಗಲೀ ಇಲ್ಲ. ಪಕ್ಷದ ಹೈಕಮಾಂಡ್ ಕೂಡ ಸಿಎಂಗೆ ಬೆಂಬಲ ನೀಡುತ್ತಿದೆ ಎಂದು ಸ್ಪಷ್ಟಪಡಿಸಿದರುಕೆಸಿ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಕೂಡ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅವರೆಲ್ಲ ಸಿಎಂ ಜೊತೆಗಿದ್ದಾರೆ ಮುಡಾ ಹಗರಣದಲ್ಲಿ ಸಿಎಂ ಪಾತ್ರವಿಲ್ಲ. ಕಾನೂನು ಹೋರಾಟಕ್ಕೆ ಅವಕಾಶವಿರುವುದರಿಂದ ರಾಜೀನಾಮೆ ನೀಡುವ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರು ಯಾವುದೇ ಕಡತ ಅಥವಾ ದಾಖಲೆಗಳಿಗೆ ಸಹಿ ಹಾಕಿಲ್ಲ, ಯಾವುದೇ ಅಧಿಕಾರವನ್ನೂದುರುಪಯೋಗಪಡಿಸಿಕೊಂಡಿಲ್ಲ. ಇದನ್ನು ಆಧರಿಸಿಯೇ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ನ್ಯಾಯಾಲಯದ ಆದೇಶ ನಮ್ಮ ಪರವಾಗಿ ಬಂದಿಲ್ಲ. ನಾವು ಆದೇಶವನ್ನು ಗೌರವಿಸುತ್ತೇವೆ. ಆದರೆ, ನಮಗೆ ನ್ಯಾಯ ಸಿಕ್ಕಿಲ್ಲ ಎಂಬುದು ನಮ್ಮ ಭಾವನೆ. ನಮ್ಮ ಕಾನೂನು ಹೋರಾಟ ಮುಂದುವರೆಯಲಿದೆ ಸಿಎಂ ಕೂಡ ಹೇಳಿದ್ದಾರೆ ಎಂದು ತಿಳಿಸಿದರು.