ನಿಮ್ಮ ಮೇಲಿನ ನಂಬಿಕೆ ಉಳಿಬೇಕು ಅಂದ್ರೆ... ರಾಜಿನಾಮೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಸಲಹೆ ನೀಡಿದ ಸಂತೋಷ್ ಹೆಗ್ಡೆ

Waves of Karnataka


 ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಆದೇಶಿಸಿದ್ದನ್ನು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯಗೆ ಕಾನೂನು ಹೋರಾಟದಲ್ಲಿ ಆರಂಭಿಕ ಹಿನ್ನಡೆಯಾಗಿದೆ. ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ನಿನ್ನೆ ಅರ್ಜಿ ವಜಾಗೊಳಿಸಿತ್ತು. ಇದರ ಮಧ್ಯೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದೆ.ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರು, ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ಉದಾಹರಣೆಯೊಂದಿಗೆ ಸಿದ್ದರಾಮಯ್ಯಗೆ ಮಹತ್ವದ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಹಿಂದೆ ರೈಲ್ವೆ ಸಚಿವರಾಗಿದ್ದಾಗ ಲಾಲ್ ಬಹದ್ದೂರ್ ಶಾಸ್ತ್ರಿ ರೈಲು ಅಪಘಾತ ಸಂಭವಿಸಿದ್ದಕ್ಕೆ ಅದರ ಹೊಣೆಹೊತ್ತು ರಾಜೀನಾಮೆ ನೀಡಿದ್ದರು.