ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್; ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ!

Waves of Karnataka


 ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಹೌದು.. ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಆಘಾತ ನೀಡಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಜಾಗೊಳಿಸಿದೆ.

ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.