ಬೆಂಗಳೂರಿನ ಉದ್ದೇಶಿತ 2ನೇ ವಿಮಾನ ನಿಲ್ದಾಣಕ್ಕಾಗಿ ಅಂತಿಮ ಸುತ್ತಿನಲ್ಲಿ 5 ಸ್ಥಳಗಳನ್ನು ಗುರುತಿಸಲಾಗಿದ್ದು, ಒಂದು ವಾರದಲ್ಲಿ ತೀರ್ಮಾನಿಸಲಾಗುತ್ತದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
ಶುಕ್ರವಾರ ಅವರು ತಮ್ಮ ಕಚೇರಿಯಲ್ಲಿ ಕರೆದಿದ್ದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದು, 'ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಸಾರ್ವಜನಿಕರು ಮತ್ತು ಉದ್ಯಮಗಳಿಗೆ ಇನ್ನೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ.
ಇದಕ್ಕಾಗಿ ಸರಕಾರವು ಐದು ಸ್ಥಳಗಳನ್ನು ಗುರುತಿಸಿದೆ. ಆದರೆ ಇವುಗಳ ಪೈಕಿ ಯಾವುದನ್ನೂ ಆಖೈರು ಮಾಡಿಲ್ಲ. ಈ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ಸೇರಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು' ಎಂದು ತಿಳಿಸಿದ್ದಾರೆ