ದಾವಣಗೆರೆಯಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 48 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಸೆಪ್ಟೆಂಬರ್ 19ರಂದು ದಾವಣಗೆರೆಯ ಅರಳಿಮರ ಸರ್ಕಲ್ ಬಳಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಅಜಾದ್ ನಗರ ಮುಖ್ಯ ರಸ್ತೆಯಿಂದ ಮೊದಲು ಕಲ್ಲು ತೂರಿದ್ದು ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಈ ವೇಳೆ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ-ಮುಸ್ಲಿಂ ಸೇರಿ 48 ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿದೆ