ಚನ್ನಪಟ್ಟಣ ಉಪಚುನಾವಣೆ: ಪಕ್ಷದ ತೀರ್ಮಾನಕ್ಕೆ ಬದ್ಧ ಎಂದ ಡಿಕೆ ಸುರೇಶ್! ಸ್ಪರ್ಧೆ ಮಾಡೋದು ಫಿಕ್ಸ್‌?

Waves of Karnataka


 ಚನ್ನಪಟ್ಟಣ ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸುವಂತೆ ಒತ್ತಡ ಹೆಚ್ಚಿದೆ. ಎಐಸಿಸಿ ಅಧ್ಯಕ್ಷರ ಹಾಗೂ ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ" ಎಂದು ಮಾಜಿ ಸಂಸದ ಡಿಕೆ ಸುರೇಶ್ ಅವರು ಹೇಳಿದರು.

ಸದಾಶಿವನಗರ ತಮ್ಮ ನಿವಾಸದಲ್ಲಿ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು "ನಾನು ಅಭ್ಯರ್ಥಿಗಿಂತ ಕಾರ್ಯಕರ್ತನಾಗಿ ಕೆಲಸ ಮಾಡುವುದರಲ್ಲಿ ಹೆಚ್ಚು ಖುಷಿ ಕಾಣುತ್ತೇನೆ. ಪಕ್ಷವು ಎರಡು, ಮೂರು ದಿನಗಳಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಪಕ್ಷದ ವರಿಷ್ಠರೆಲ್ಲ ಬದ್ಧವಾಗಿದ್ದೇವೆ" ಎಂದು ಹೇಳಿದರು.

ಚನ್ನಪಟ್ಟಣ ತಾಲೂಕು ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿಯೂ ಉಪಚುನಾವಣೆ ಅಭ್ಯರ್ಥಿಯ ವಿಚಾರವಾಗಿ ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇವೆ ಎನ್ನುವ ಮಾತು ಕೇಳಿ ಬಂದಿದೆ" ಎಂದರು.