ಕಷ್ಟ ಹೇಳಿಕೊಂಡು ಬರುವ ಜನರಿಗೆ ಸಿಎಂ ಸ್ಥಾನದಲ್ಲಿರುವವರೂ ಯಾವ ರೀತಿ ವರ್ತಿಸಬೇಕು. ಸೌಜನ್ಯದಿಂದಲೋ ಅಥವಾ ಅಹಂಕಾರದಿಂದಲೋ. ಬೆಳಗಾವಿಯ ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾಗ ಸಿಎಂ ಸಿದ್ದರಾಮಯ್ಯ ನಡೆದುಕೊಂಡ ರೀತಿ ಇದೀಗ ವ್ಯಾಪಕ ಟೀಕೆಗೆ ಗುರಿಯಾಗುತ್ತಿದೆ.
ತಾಯಿ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದು ಹೊರಬರುತ್ತಿದ್ದಾಗ ವ್ಯಕ್ತಿಯೊಬ್ಬರು ಜಿಲ್ಲಾಡಳಿತದಿಂದ ಸರಿಯಾಗಿ ಕೆಲಸ ಆಗ್ತಾ ಇಲ್ಲ ಎಂದು ತಮ್ಮ ಕಷ್ಟ ಹೇಳಿಕೊಳ್ಳುತ್ತಾರೆ. ಈ ವೇಳೆ ಆಕ್ರೋಶಗೊಂಡ ಸಿದ್ದರಾಮಯ್ಯ ಹೇ ಥೂ ಎಂದು ಬೈದಿರುವ ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಸಿಎಂ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.