ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂದಕ್ಕೆ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವಂತೆಯೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, 'ಕೋರ್ಟ್ ಅನುಮತಿ ನೀಡಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುತ್ತೇವೆ' ಎಂದು ಹೇಳಿದ್ದಾರೆ.
ಭಾನುವಾರ ನಗರದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ. ಆದರೆ, ಅದಕ್ಕೆ ಕೋರ್ಟ್ ಅನುಮತಿ ಅಗತ್ಯವಾಗಿದೆ. ಕೋರ್ಟ್ ಅನುಮತಿ ನೀಡಿದರೆ ಮಾತ್ರ ಪ್ರಕರಣ ಹಿಂಪಡೆಯಲು ಆಗುತ್ತದೆ. ಇಲ್ಲದಿದ್ದರೆ ಸಾಧ್ಯವಿಲ್ಲ’ ಎಂದು ಹೇಳಿದರು.