ದಿಢೀರ್ ಅನಾರೋಗ್ಯ: ಮಾಜಿ ಸಿಎಂ SM ಕೃಷ್ಣ ಆಸ್ಪತ್ರೆಗೆ ದಾಖಲು!

Waves of Karnataka


 ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಇಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಜಿ ಕೇಂದ್ರ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಆರೋಗ್ಯ ತಪಾಸಣೆ ಮತ್ತು ಆಪ್ಟಿಮೈಸೇಶನ್ಗಾಗಿ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಸೋಮವಾರ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. 92 ವರ್ಷದ ಎಸ್ಎಂ ಕೃಷ್ಣ ಅವರು, 2009ರಿಂದ 2012ರವರೆಗೆ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇನ್ನು ಇದಕ್ಕೂ ಮುನ್ನ ಆಗಸ್ಟ್‌ನಲ್ಲಿ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು