ದೇಶಾದ್ಯಂತ ವಕ್ಫ್ ಆಸ್ತಿಗಳನ್ನು ಕಬಳಿಸಲು ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ, 2024 ಅನ್ನು ಸಿದ್ಧಪಡಿಸಿದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‌ಬಿ) ಸೋಮವಾರ ಆರೋಪಿಸಿದೆ.
ವಕ್ಫ್ ಕುರಿತ ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಸಹ ತನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿಲ್ಲ ಎಂದು ಎಐಎಂಪಿಎಲ್‌ಬಿ ವಕ್ತಾರ ಎಸ್ ಕ್ಯೂ ಆರ್ ಇಲ್ಯಾಸ್ ದೂರಿದ್ದಾರೆ
.ಬೆಂಗಳೂರಿನಲ್ಲಿ ಭಾನುವಾರ ಮುಕ್ತಾಯಗೊಂಡ ಎಐಎಂಪಿಎಲ್‌ಬಿಯ 29ನೇ ಸಮಾವೇಶದ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಇಲ್ಯಾಸ್, ದೇಶದಾದ್ಯಂತ ಇರುವ ವಕ್ಫ್ ಆಸ್ತಿಗಳನ್ನು ಕಬಳಿಸಲು ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ಕುತಂತ್ರದಿಂದ ಸಿದ್ಧಪಡಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.