ಕನಕಪುರದಲ್ಲಿ ಭಾನುವಾರ ನಡೆದ ಕನಕಾಂಬರಿ ಮಹಿಳಾ ಒಕ್ಕೂಟದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿ ಇದ್ದ ಬಿಜೆಪಿ ಮೈತ್ರಿ ಸರ್ಕಾರ ನಮ್ಮ ಗೃಹಲಕ್ಷ್ಮೀ ಯೋಜನೆಯನ್ನೇ ನಕಲು ಮಾಡಿ 'ಮಾಝಿ ಲಡಕಿ ಬಹಿನ್ ಯೋಜನಾ' ಎಂದು ಹೆಸರಿಟ್ಟು 1,500 ರೂಪಾಯಿಯನ್ನು ಕೊಟ್ಟಿದ್ದರು. ನಾವು ಮಹಾಲಕ್ಷ್ಮಿ ಎನ್ನುವ ಹೆಸರಿಟ್ಟು 3,000 ಸಾವಿರ ಕೊಡುವುದಾಗಿ ಭರವಸೆ ನೀಡಿದ್ದೆವು. ಆದರೆ ಅಲ್ಲಿನ ಬಿಜೆಪಿ ಮೈತ್ರಿ ಸರ್ಕಾರ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಹಣ ನೀಡಿದ ಪರಿಣಾಮ ನಮಗಿಂತ ಅವರಿಗೆ ಹೆಚ್ಚು ಮತಗಳು ಬಂದವು ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ನಮ್ಮ ಗೃಹಲಕ್ಷ್ಮಿ ಯೋಜನೆ ನಕಲು ಮಾಡಿದ ಪರಿಣಾಮ ಬಿಜೆಪಿಗೆ ಗೆಲುವು
November 24, 2024
ಹೆಣ್ಣು ಪ್ರಗತಿ ಹೊಂದಿದರೆ ಒಂದು ಕುಟುಂಬ ಪ್ರಗತಿ ಹೊಂದಿದಂತೆ. ರಾಜ್ಯ, ಹಳ್ಳಿ ಪ್ರಗತಿಯಾದಂತೆ. ಆದ ಕಾರಣಕ್ಕೆ ನಮ್ಮ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿರುವಂತೆ ರೂಪಿಸಲಾಗಿದೆ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
Tags