ಉತ್ತರ ಪ್ರದೇಶದ ಕರ್ಹಾಲ್ ಕ್ಷೇತ್ರದಲ್ಲಿ ದಲಿತ ಮಹಿಳೆಯ ಶವ ಗೋಣಿಚೀಲದಲ್ಲಿ ಪತ್ತೆಯಾಗಿದೆ.
ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು, ಸಮಾಜವಾದಿ ಪಕ್ಷದ ಕಾರ್ಯಕರ್ತನೋರ್ವ ಉಪಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸದಂತೆ ಆಕೆಯನ್ನು ಒತ್ತಾಯಿಸುತ್ತಿದ್ದ ಎಂದು ಕುಟುಂಬ ಸದಸ್ಯರು ಆರೋಪ ಮಾಡಿದ ಬೆನ್ನಲ್ಲೇ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ
ಮಹಿಳೆಯ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪ್ರಶಾಂತ್ ಯಾದವ್ ಮತ್ತು ಮೋಹನ್ ಕಥೇರಿಯಾ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಬಿಜೆಪಿಗೆ ಮತ ಹಾಕಲು ಬಯಸಿದ್ದರಿಂದ ಆಕೆಯನ್ನು ಕೊಂದಿದ್ದಾರೆ ಎಂದು ಮಹಿಳೆಯ ಪೋಷಕರು ಹೇಳಿದ್ದಾರೆ ಎಂದು ಮೈನ್‌ಪುರಿ ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿನೋದ್ ಕುಮಾರ್ ಹೇಳಿದ್ದಾರೆ