ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ದಕ್ಷಿಣ ಭಾರತದ ಮಾರುಕಟ್ಟೆ ಮೇಲೆ ಹಿಡಿತ ಸಾಧಿಸಿರುವ ಕರ್ನಾಟಕ ಹಾಲು ಒಕ್ಕೂಟದ (KMF)ದ ನಂದಿನಿ ಬ್ರ್ಯಾಂಡ್ ಇದೀಗ ಉತ್ತರ ಭಾರತದಲ್ಲೂ ತನ್ನ ಕದಂಬ ಬಾಹುಗಳನ್ನು ಚಾಚಲು ಹೊರಟಿದೆ.
ಹೌದು.. ಕರ್ನಾಟಕದ ನಂದಿನಿ ಹಾಲು ಉತ್ಪನ್ನ ಇದೀಗ ಉತ್ತರ ಭಾರತದಲ್ಲೂ ತನ್ನ ಮಾರುಕಟ್ಟೆ ವ್ಯಾಪ್ತಿ ವಿಸ್ತರಿಸಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.
ಈ ಮೂಲಕ ಅಮುಲ್ ಮತ್ತು ಮದರ್ ಡೇರಿಯಂತಹ ಪ್ರಮುಖ ಬ್ರ್ಯಾಂಡ್ಗಳ ಜತೆ ಕರ್ನಾಟಕದ ನಂದಿನಿ ಕೂಡ ಪೈಪೋಟಿ ಒಡ್ಡಲಿದೆ.