ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್‌ಸಿ) ಬಾಣಂತಿಯೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ.
ಡಿಸೆಂಬರ್ 5ರ ರಾತ್ರಿ ನಡೆದ ಸಾವಿನ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭರವಸೆ ನೀಡಿದರು. ಈ ಮಧ್ಯೆ ಬಾಣಂತಿಯರ ಸಾವಿನ ಕುರಿತಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು, ಜಿಲ್ಲಾಸ್ಪತ್ರೆಯಲ್ಲಿ ಏನೆಲ್ಲಾ ನ್ಯೂನತೆಗಳಾಗಿವೆ ಅಂತ ನಾವು ತನಿಖೆ ಮಾಡುತ್ತಿದ್ದೇವೆ. ನಮಗೆ ಗೊತ್ತಾಗದೇ ಇನ್ನೆಷ್ಟು ಬಾಣಂತಿಯರು ಮೃತಪಟ್ಟಿದ್ದಾರೆ ಗೊತ್ತಿಲ್ಲ. ಔಷಧಿ ತಯಾರಿಸಿದ ಕಂಪನಿ ಮೇಲೆ ಕ್ರಮ ಕೈಗೊಳ್ಳುತ್ತಿದ್ದೇವೆ. ಮೃತ ಬಾಣಂತಿಯರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ್ದೇವೆ. ಇನ್ಮುಂದೆ ಇಂತಹ ಘಟನೆಗಳು ಆಗದಂತೆ ಕ್ರಮಗಳನ್ನು ಕೈಗೊಳ್ಳುತ್ತೇವೆ. ಒಂದು ವೇಳೆ ನನ್ನ ತಪ್ಪಿದ್ದರೆ ರಾಜಿನಾಮೆ ಕೊಡಲು ಸಿದ್ದ ಎಂದು ಹೇಳಿದ್ದಾರೆ.