ಫೆಂಗಲ್ ಚಂಡಮಾರುತದಿಂದ ತಮಿಳು ನಾಡಿನ ಹಲವು ಜಿಲ್ಲೆಗಳಲ್ಲಿ ಸಾವು-ನೋವು ಉಂಟಾಗಿದ್ದು, ಬೆಳೆನಷ್ಟ, ಜನಜೀವನ ಅಸ್ತವ್ಯಸ್ತವಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ರೀತಿಯ ನೆರವು ನೀಡುವುದಾಗಿ ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಸ್ಟಾಲಿನ್‌ಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡು ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದ್ದಾರೆ. ಭಾರೀ ಮಳೆಯ ನಂತರ ಉತ್ತರ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯು ಪ್ರವಾಹಕ್ಕೆ ಒಳಗಾಗಿದೆ, ಸೇತುವೆಗಳು ಮತ್ತು ರಸ್ತೆಗಳು ಮುಳುಗಿಹೋಗಿದ್ದರಿಂದ ಹಳ್ಳಿಗೆ, ವಸತಿ ಕಾಲೊನಿಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ, ರೈತರ ಬೆಳೆದು ನಿಂತಿರುವ ಬೆಳೆಗಳು ಮುಳುಗಿ ಹೋಗಿವೆ.