ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ಹೇಳಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ವಾಗ್ದಾಳಿ ನಡೆಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, 'ಸೈಟ್ ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದು ಹೋಗುತ್ತದೆಯೇ' ಎಂದು ಪ್ರಶ್ನಿಸಿದ್ದಾರೆ