ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆಂದು ವಿಜಯಾ ಆಸ್ಪತ್ರೆ ವೈದ್ಯರು ಗುರುವಾರ ತಿಳಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ಸ್ಥಿರವಾಗಿದೆ. ಚೇತರಿಸಿಕೊಳ್ಳಲು ಕನಿಷ್ಠ 1 ತಿಂಗಳ ಬೆಡ್ ರೆಸ್ಟ್ ಅಗತ್ಯವಿದೆ ಎಂದು ಎಂದು ಮೂಳೆ ತಜ್ಞ ಡಾ.ರವಿ ಪಾಟೀಲ್ ಅವರು ಹೇಳಿದ್ದಾರೆ.
ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಬ್ಬಾಳ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅಲ್ಟ್ರಾಸೌಂಡ್ ಮತ್ತು ಕ್ಲಿನಿಕಲ್ ಪರೀಕ್ಷೆಗಳು ತೃಪ್ತಿಕರವಾಗಿವೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದರು
ಹೆಬ್ಬಾಳ್ಕರ್ ಅವರ ಸಹೋದರ ಎಂಎಲ್‌ಸಿ ಚನ್ನರಾಜ್ ಅವರ ಆರೋಗ್ಯವೂ ಸುಧಾರಿಸಿದ್ದು, ಅವರನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಹೇಳಿದರು.