ಬೆಂಗಳೂರಿನಲ್ಲಿ ಬಹು ನಿರೀಕ್ಷಿತ ಅಮೆರಿಕ ರಾಯಭಾರ ಕಚೇರಿ ಜನವರಿ 17 ರಂದು ಉದ್ಘಾಟನೆಯಾಗಲಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಗುರುವಾರ ತಿಳಿಸಿದ್ದಾರೆ.
"ನನ್ನ ಪ್ರೀತಿಯ ಬೆಂಗಳೂರು, ಇದು ಅಧಿಕೃತ. ಜನವರಿ 17 ರಂದು ಅಮೆರಿಕ ರಾಯಭಾರ ಕಚೇರಿ ಉದ್ಘಾಟನೆಗೊಳ್ಳಲಿದೆ" ಎಂದು ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನು ಸಾಧ್ಯವಾಗಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಬಿಜೆಪಿ ಸಂಸದ ಶ್ಲಾಘಿಸಿದ್ದಾರೆ.