ADGP ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ HDK ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಗುರುವಾರ ಆದೇಶ ನೀಡಿದೆ.

Waves of Karnataka

ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಗುರುವಾರ ಆದೇಶ ನೀಡಿದೆ.

ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸುರೇಶ್‌ಬಾಬು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.

ಅಲ್ಲದೆ, ಮುಂದಿನ ವಿಚಾರಣೆವರೆಗೂ ಹೆಚ್.ಡಿ.ಕುಮಾರಸ್ವಾಮಿಗೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ. ಜೊತೆಗೆ, ಈ ಎಫ್‌ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತಿಲ್ಲ ಎಂದು ಆದೇಶಿಸಿತು.