ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ ಎಂದು ಡಿಕೆಶಿ.

Waves of Karnataka


 ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ. ನನ್ನ ಪರವಾಗಿ ಯಾರೂ ಒತ್ತಾಯ ಮಾಡುವುದು ಬೇಡ'' ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತ, ''ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ, ಫಲಾಫಲ ದೇವರಿಗೆ ಬಿಡೋಣ. ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಅವರು ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ. ಆದರೆ, ಈ ವಿಚಾರದಲ್ಲಿ ಯಾವುದೇ ಶಾಸಕರು ನನಗೆ ಬೆಂಬಲ ನೀಡುವುದು ಬೇಡ. ನಾನುಂಟು, ಕಾಂಗ್ರೆಸ್ ಪಕ್ಷವುಂಟು. ಪಕ್ಷದ ನಾಯಕರು ಹೇಳಿದಂತೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ. ನನ್ನ ಪರವಾಗಿ ಶಾಸಕರು, ಕಾರ್ಯಕರ್ತರು ಕೂಗುವುದು ಬೇಡ. ನಾನು ನನ್ನ ಕರ್ತವ್ಯ ಮಾಡುತ್ತೇನೆ'' ಎಂದು ಹೇಳಿದರು.