ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ನಗರದ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ರಸ್ತೆಬದಿ ಶೆಡ್‌ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕೊಯ್ದಿದ್ದು, ಮೂಕರೋಧನೆ ಅನುಭವಿಸುತ್ತಿದ್ದ ಹಸುಗಳಿಗೆ ಚಾಮರಾಜಪೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿಷಯ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಘಟನಾ ಸ್ಥಳದಲ್ಲಿ ಜಮಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದೆ. ಕಾಟನ್‌ಪೇಟೆ ಠಾಣೆ ಪೊಲೀಸ್ ಸಿಬ್ಬಂದಿ, ಚಿಕ್ಕಪೇಟೆ ಉಪವಿಭಾಗದ ಎಸಿಪಿ ನೇತೃತ್ವದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.