ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ನಂದಿನಿ ಉತ್ಪನ್ನಗಳು ಲಭ್ಯವಾಗಲಿವೆ. ಈ ಸಂಬಂಧ ಕೆಎಂಎಫ್ ಚಾಯ್ ಪಾಯಿಂಟ್ ಜೊತೆ ಒಡಂಬಡಿಕೆ ಮಾಡಿಕೊಂಡಿದೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕೆಎಂಎಫ್, ಗುಡ್ ಲೈಫ್ ಹಾಲು ಹಾಗೂ ಇತರ ನಂದಿನಿ ಉತ್ಪನ್ನಗಳ ಮಾರಾಟ ಮಾಡುವ ಸಂಬಂಧ ಚಾಯ್ ಪಾಯಿಂಟ್ ಜೊತೆ ಪಾಲುದಾರಿಕೆ ಮಾಡಲಾಗಿದೆ. ಚಾಯ್ ಪಾಯಿಂಟ್ ಭಾರತ ದೇಶದ ಅತಿದೊಡ್ಡ ಟೀ ಕೆಫೆ ಸಂಸ್ಥೆಯಾಗಿದ್ದು, ಪ್ರಯಾಗ್ ರಾಜ್ನಲ್ಲಿ ನಡೆಯಲಿರುವ ಮಹಾ ಕುಂಭ ಮೇಳ 2025 ರಲ್ಲಿ ಪಾನೀಯ ಮಾರಾಟ ವ್ಯವಹಾರದಲ್ಲಿ ಮುಂಚೂಣಿಯಲ್ಲಿದೆ. ಮಹಾಕುಂಭ ಮೇಳ ಜ.13 ರಿಂದ ಜ.20 ರವರೆಗೆ ನಡೆಯಲಿದ್ದು, ಜಗತ್ತಿನಾದ್ಯಂತ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ನಿರೀಕ್ಷೆ ಇದೆ.
ಮಹಾ ಕುಂಭ ಮೇಳ ಆಯೋಜಿಸಲಾಗಿರುವ ಸಂಕೀರ್ಣದಲ್ಲಿ ಚಾಯ್ ಪಾಯಿಂಟ್ 10 ಮಳಿಗೆಗಳನ್ನು ತೆರೆಯಲಾಗುತ್ತಿದ್ದು, ಇಲ್ಲಿ ಮಹಾ ಕುಂಭ ಮೇಳದಲ್ಲಿ ಪಾಲ್ಗೊಳ್ಳುವ ಪ್ರವಾಸಿಗರಿಗೆ ಒಂದು ಕೋಟಿ ಕಪ್ಗಳಿಗಿಂತಲೂ ಹೆಚ್ಚು ಚಹಾ ತಯಾರಿಸಿ, ಒದಗಿಸಲು ಸಿದ್ಧತೆ ಮಾಡಿಕೊಂಡಿದೆ. ಒಂದೇ ಸಮಾರಂಭದಲ್ಲಿ ಅತೀ ಹೆಚ್ಚು ಕಪ್ ಚಹಾ ಮಾರಾಟ ಮಾಡಿ ಗಿನ್ನಿಸ್ ವಿಶ್ವ ದಾಖಲೆ ಸ್ಥಾಪಿಸುವ ಗುರಿಯನ್ನು ಸಹ ಹೊಂದಿದೆ. ಮಹಾ ಕುಂಭ ಮೇಳದಲ್ಲಿ ಸಿದ್ಧಪಡಿಸಲಾಗುವ ಪ್ರತಿಯೊಂದು ಕಪ್ ಚಹಾ ನಂದಿನಿಯ ಪರಿಶುದ್ಧ ಹಾಗೂ ಉತ್ಪತ ಗುಣಮಟ್ಟದ ಹಾಲನ್ನು ಬಳಸಿ ತಯಾರಿಸಲಾಗುತ್ತದೆ